ಕಂದಕಕ್ಕೆ ಸೇನಾ ವಾಹನ ಉರುಳಿ ಬಿದ್ದು 9 ಯೋಧರು ಹುತಾತ್ಮ: ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಲಡಾಖ್‌ನಲ್ಲಿ ಕಂದಕಕ್ಕೆ ಸೇನಾ ವಾಹನ ಉರುಳಿ ಬಿದ್ದ ಪರಿಣಾಮ 9 ಸೈನಿಕರು ಹುತಾತ್ಮರಾಗಿದ್ದು, ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ದೇಶಕ್ಕೆ ಅವರು ಸಲ್ಲಿಸಿದ ಸೇವೆ ಸದಾ ಸ್ಮರಣೀಯ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, “ಮೃತ ಸೈನಿಕರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಲೇಹ್ ಬಳಿ ಸಂಭವಿಸಿದ ಅಪಘಾತದಿಂದ ನಾವು ಭಾರತೀಯ ಸೇನೆಯ ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ದೇಶಕ್ಕಾಗಿ ಅವರು ನೀಡಿದ ಸೇವೆಯನ್ನು ಯಾವಾಗಲೂ ಸ್ಮರಿಸಲಾಗುವುದು. ದುಃಖಿತ ಕುಟುಂಬಗಳಿಗೆ ಸಂತಾಪಗಳು.
ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ” ಎಂದು ಪ್ರಧಾನಿ ಹೇಳಿದ್ದಾರೆ.

ಶನಿವಾರ ಸಂಜೆ 6:30 ರ ಸುಮಾರಿಗೆ ದಕ್ಷಿಣ ಲಡಾಖ್‌ನ ನ್ಯೋಮಾದಲ್ಲಿ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಒಂಬತ್ತು ಭಾರತೀಯ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದು, ಒಬ್ಬರು ಗಾಯಗೊಂಡಿರುವ ದುರಂತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!