‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್’ ಗೌರವಕ್ಕೆ ಭಾಜನರಾದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಫ್ರಾನ್ಸ್‌ನ ಅತ್ಯುನ್ನತ ಪ್ರಶಸ್ತಿ ʼಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ಪ್ರಶಸ್ತಿʼಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಲಾಗಿದೆ. ಈ ಗೌರವಕ್ಕೆ ಪಾತ್ರರಾದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಫ್ರಾನ್ಸ್ ಗೆ ಹೋಗಿದ್ದು, ಈ ವೇಳೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಫ್ರಾನ್ಸ್‌ನ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಅವರ ಗೌರವಕ್ಕೆ ಭಾರತದ ಜನತೆಯ ಪರವಾಗಿ ಪ್ರಧಾನಿ ಮೋದಿ
ಧನ್ಯವಾದ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಎಲಿಸೀ ಪ್ಯಾಲೇಸ್​ನಲ್ಲಿ ನಡೆಯಿತು, ಅಲ್ಲಿ ಮ್ಯಾಕ್ರನ್ ಅವರು ಪ್ರಧಾನಿ ಮೋದಿಯವರಿಗೆ ಖಾಸಗಿ ಔತಣಕೂಟಕ್ಕೆ ಆತಿಥ್ಯ ನೀಡಿದ್ದಾರೆ.

ಪ್ರಧಾನಿ ಮೋದಿಯವರಿಗಿಂತ ಮೊದಲು ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ಅನ್ನು ವಿಶ್ವದಾದ್ಯಂತದ ಆಯ್ದ ನಾಯಕರು ಮತ್ತು ಪ್ರಸಿದ್ಧ ವ್ಯಕ್ತಿಗಳು ಸ್ವೀಕರಿಸಿದ್ದಾರೆ. ಇವರಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ, ಆಗಿನ ವೇಲ್ಸ್ ರಾಜಕುಮಾರ ಚಾರ್ಲ್ಸ್, ಜರ್ಮನಿಯ ಮಾಜಿ ಚಾನ್ಸಲರ್ ಏಂಜೆಲಾ ಮರ್ಕೆಲ್, ಬೌಟ್ರೋಸ್ ಬೌಟ್ರೋಸ್-ಘಲಿ ಮತ್ತು ವಿಶ್ವಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!