ರೋಜ್‌ಗಾರ್‌ ಮೇಳ: 50 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರೋಜಗಾರ್ ಮೇಳದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು 50 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು, ರೈಲ್ವೆ, ಅಂಚೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಭರ್ತಿಯಾದ ನೌಕರರಿಗೆ ನೇಮಕಾತಿ ಪತ್ರಗಳನ್ನು ನೀಡಿದರು.

ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ರೋಜ್‌ಗಾರ್ ಮೇಳವನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರಾರಂಭಿಸಲಾಯಿತು. ಕೇಂದ್ರ ಸರ್ಕಾರ, ಎನ್‌ಡಿಎ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ‘ರೋಜ್‌ಗಾರ್ ಮೇಳ’ ಆಯೋಜಿಸಲಾಗುತ್ತಿದೆ. ಈವರೆಗೆ ಲಕ್ಷಾಂತರ ಯುವಕರಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ ವಿತರಿಸಲಾಗಿದೆ. ಇಂದು 50,000 ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೀಡಲಾಗಿದೆ. ದೀಪಾವಳಿಗೆ ಸ್ವಲ್ಪ ಸಮಯವಿದೆ, ಆದರೆ ಈ ಸಂದರ್ಭವು ನೇಮಕಾತಿ ಪತ್ರಗಳನ್ನು ಸ್ವೀಕರಿಸುವ 50,000 ಮಂದಿಯ ಕುಟುಂಬಗಳಿಗೆ ದೀಪಾವಳಿಗಿಂತ ಕಡಿಮೆಯೇನಲ್ಲ ಎಂದು ಬಣ್ಣಿಸಿದರು.

ರೋಜ್‌ಗಾರ್ ಮೇಳವು ದೇಶದಾದ್ಯಂತ 37 ಸ್ಥಳಗಳಲ್ಲಿ ನಡೆಯಲಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ. ದೇಶಾದ್ಯಂತ ಆಯ್ಕೆಯಾದ ಹೊಸ ನೇಮಕಾತಿಗಳು ಹಣಕಾಸು ಸೇವೆಗಳ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಕಂದಾಯ ಇಲಾಖೆ, ಆರೋಗ್ಯ ಸಚಿವಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸರ್ಕಾರಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಕುಟುಂಬ ಕಲ್ಯಾಣ, ಪರಮಾಣು ಶಕ್ತಿ ಇಲಾಖೆ, ರೈಲ್ವೆ ಸಚಿವಾಲಯ, ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಪರಮಾಣು ಶಕ್ತಿ ಇಲಾಖೆ ಮತ್ತು ಗೃಹ ಸಚಿವಾಲಯ ಸೇರಿದಂತೆ ಇತರೆ ಇಲಾಖೆಗಳು ಇವೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗಾರ್ ಮೇಳವು ಒಂದು ಹೆಜ್ಜೆಯಾಗಿದೆ.

ರೋಜ್‌ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!