71 ಸಾವಿರ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದ ರೋಜ್ ಗಾರ್ ಮೇಳದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ 71 ಸಾವಿರಕ್ಕೂ ಅಧಿಕ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಿದರು.

ಕಳೆದ ವರ್ಷ ಅಕ್ಟೋಬರ್ 22 ರಂದು 10 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ‘ರೋಜ್ಗಾರ್ ಮೇಳ’ದ ಮೊದಲ ಹಂತಕ್ಕೆ ಪ್ರಧಾನಿ ಚಾಲನೆ ನೀಡಿದ್ದರು.

2023ರ ಅಂತ್ಯದೊಳಗೆ 10 ಲಕ್ಷ ಮಂದಿಗೆ ಉದ್ಯೋಗ ಒದಗಿಸುವ ಭರವಸೆಯನ್ನು ಕೂಡ ನೀಡಿದ್ದಾರೆ. ಕೇಂದ್ರ ಸರ್ಕಾರದ ಉದ್ಯೋಗ ಸೃಷ್ಟಿಯ ಆದ್ಯತೆಯ ಮೇರೆಗೆ ತನ್ನ ಬದ್ಧತೆಯನ್ನು ಈಡೇರಿಸಲು ಈ ಅಭಿಯಾನವು ಮುಂಚೂಣಿಯದ್ದಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉದ್ಯೋಗ ಮತ್ತು ಯುವಜನತೆಗೆ ಉತ್ತಮ ಅವಕಾಶ ಒದಗಿಸುವಲ್ಲಿ ದೇಶದ ಬೆಳವಣಿಗೆಯಲ್ಲಿ ನೇರವಾಗಿ ಭಾಗಿಯಾಗಲು, ಯುವಶಕ್ತಿಯನ್ನು ಸಶಕ್ತೀಕರಣಗೊಳಿಸಲು ಸಹಾಯವಾಗಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿದೆ. ಕಳೆದ ವರ್ಷವೂ ಅಕ್ಟೋಬರ್ ಹಾಗೂ ನವೆಂಬರ್​ನಲ್ಲಿ ಪ್ರಧಾನಿ ನೇಮಕಾತಿ ಪತ್ರಗಳನ್ನು ವಿತರಿಸಿದ್ದರು.

ಈ ಉದ್ಯೋಗ ಮೇಳದಲ್ಲಿ ರೈಲ್ವೆ ಸಚಿವಾಲಯದ ಗರಿಷ್ಠ ನೇಮಕಾತಿ ಪತ್ರಗಳಿದ್ದು, 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ರೈಲ್ವೆ ಸಚಿವಾಲಯದ ಹೊರತಾಗಿ ಅಂಚೆ ಇಲಾಖೆ ಹಾಗೂ ಹಣಕಾಸು ಸೇವೆಗಳ ಇಲಾಖೆಯಲ್ಲಿ ಇರುವ ಹುದ್ದೆಗಳಿಗೂ ನೇಮಕಾತಿ ನಡೆಯಲಿದೆ. ಈ ವರ್ಷದ ಅಂತ್ಯದೊಳಗೆ ಒಂದು ಮಿಲಿಯನ್ ಸರ್ಕಾರಿ ಉದ್ಯೋಗಗಳನ್ನು ನೀಡುವುದಾಗಿ ಮೋದಿ ಸರ್ಕಾರ ಘೋಷಿಸಿದೆ.

ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ ಕರ್ಮಯೋಗಿ ಪ್ರಮುಖ ಮೂಲಕ ತರಬೇತಿ ಪಡೆಯಲು ಅವಕಾಶ ನೀಡಲಾಗುತ್ತದೆ. ಇದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಎಲ್ಲಾ ಸಿಬ್ಬಂದಿಗೆ ಆನ್​ಲೈನ್ ಓರಿಯಂಟೇಷನ್ ಕೋರ್ಸ್​ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!