ನಾಳೆ ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿ: ಕಾರ್ಯಕ್ರಮಗಳ ಸಂಪೂರ್ಣ ವಿವರ ಇಲ್ಲಿದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಮತ ಪ್ರಚಾರದ ಬೃಹತ್ ಸಮಾವೇಶ ಕಾರ್ಯಕ್ರಮ ನಾಳೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೋಟೆ ನಾಡಿಗೆ ಆಗಮಿಸಲಿದ್ದಾರೆ.

ನಾಳೆ ಬೆಳಗ್ಗೆ ಸುಮಾರು 10.30ಕ್ಕೆ ಪ್ರಧಾನಿ ಮೋದಿ ಕಾರ್ಯಕ್ರಮ ಆರಂಭವಾಗಲಿದ್ದು, ಸುಮಾರು ಎರಡೂವರೆ ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಇದಲ್ಲದೆ ರಾಜ್ಯ ನಾಯಕರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ 10 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೊದಲು ನಗರದ ಒನಕೆ ಓಬವ್ವ ಸ್ಟೇಡಿಯಂಗೆ ಆಗಮಿಸಲಿರುವ ಪ್ರಧಾನಿ ಮೋದಿಯವರು ಅಲ್ಲಿಂದ ಓಕಾರ್ ಮೂಲಕ ಜಯದೇವ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕೋಟೆನಾಡಿನ ಬುಡಕಟ್ಟು ಸಂಸ್ಕೃತಿಯನ್ನು ಬಿಂಬಿಸಲು ಜಿಲ್ಲಾ ಬಿಜೆಪಿ ನಾಯಕರು ಪ್ಲಾನ್ ಮಾಡಿಕೊಂಡಿದ್ದು, ಪ್ರಧಾನಿ ಮೋದಿಯವರಿಗೆ ಮ್ಯಾಸ ಬೇಡರ ಧಿರಿಸಿನ ಮಾದರಿ ಸನ್ಮಾನ ಮಾಡಲು ಯೋಜನೆ ರೂಪಿಸಿದ್ದಾರೆ. ಹಾಗೇ ತಮಟೆ ಬಾರಿಸಿ ಸಮಾವೇಶ ಉದ್ಘಾಟನೆಗೆ ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗುತ್ತದೆ. ಪ್ರಧಾನಿ ಮೋದಿಯವರಿಗೆ ವೀರ ವನಿತೆ ಒನಕೆ ಓಬವ್ವ ವಿಗ್ರಹವನ್ನು ಉಡುಗೊರೆ ನೀಡಲು‌ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ವಿಮಾನದ ಮೂಲಕ ಚಳ್ಳಕೆರೆ ತಾಲೂಕಿನ ಕುದಾಪುರದ ಬಳಿ ಇರುವ ಡಿಆರ್‌ಡಿಓಗೆ ಆಗಮಿಸುವ ಪ್ರಧಾನಿಯವರು, ನಂತರ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ನಗರದ ಓನಕೆ ಓಬವ್ವ ಕ್ರೀಡಾಂಗಣಕ್ಕೆ ಆಗಮಿಸಿ, ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ನಗರಕ್ಕೆ ಆಗಮಿಸುವ ಹಾಗೂ ಹೊರ ಹೋಗುವ ವಾಹನಗಳ ರಸ್ತೆ ಮಾರ್ಗಗಳನ್ನು ಬದಲಾಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!