ಹೊಸದಿಗಂತ ಡಿಜಿಟಲ್ ಡೆಸ್ಕ್
ಸ್ವಾತಂತ್ರ್ಯ ದಿನಾಚರಣೆ ಮತ್ತು ಭಾಷಣಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿಶಿಷ್ಟ ಉಡುಪುಗಳು ಯಾವಾಗಲೂ ರಾಷ್ಟ್ರದ ಗಮನವನ್ನು ಸೆಳೆಯುತ್ತವೆ. ಇಂದು 76 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸುವಾಗಲೂ ಮೋದಿ ತಮ್ಮ ವಿಶಿಷ್ಟ ಉಡುಗೆಗಳಿಂದ ಗಮನ ಸೆಳೆದಿದ್ದಾರೆ. ರಾಷ್ಟ್ರ ಧ್ವಜದ ಚಿತ್ರವಿರುವ ವಿಶೇಷ ವಿನ್ಯಾಸದ ಬಿಳಿಯ ಟರ್ಬನ್ (ಶಿರಸ್ತ್ರಾಣ) ತೊಟ್ಟು, ಬಿಳಿ ಜುಬ್ಬಾ- ಪೈಜಾಮ ಅದರ ಮೇಲೆ ಅದಕ್ಕೊಪ್ಪುವ ನೀಲಿ ಬಣ್ಣದ ಜಾಕೆಟ್ ತೊಟ್ಟು ಮೋದಿ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.
Addressing the nation on Independence Day. https://t.co/HzQ54irhUa
— Narendra Modi (@narendramodi) August 15, 2022
ಸಾಂಪ್ರದಾಯಿಕ ಉಡುಪನ್ನು ಧರಿಸಿದ ಪ್ರಧಾನಿ ಮೋದಿ ಅವರು ಕೆಂಪು ಕೋಟೆಯ ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಸತತ ಒಂಬತ್ತನೇ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಮೋದಿಯವರು 2014ರಿಂದಲೂ ಸ್ವಾತಂತ್ರ್ಯೋತ್ಸವ ಹಾಗೂ ಗಣರಾಜ್ಯೋತ್ಸವದಂದು ವರ್ಣರಂಜಿತ ವಿಭಿನ್ನ ಮಾದರಿಯ ಪೇಟಗಳನ್ನು ಧರಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ.