ಪ್ರಧಾನಿ ಮೋದಿ ʼಮನ್‌ ಕಿ ಬಾತ್‌ʼ 97ನೇ ಸಂಚಿಕೆ ಇಂದು ಪ್ರಸಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪ್ರಧಾನಿ ನರೇಂದ್ರ ಮೋದಿ ಅವರು ಇಂದು 2023ರ ಮೊದಲ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿಯವರ ಜನಪ್ರಿಯ ಮಾಸಿಕ ರೇಡಿಯೋ ಕಾರ್ಯಕ್ರಮವಾದ ಮನ್ ಕಿ ಬಾತ್ ನ 97ನೇ ಆವೃತ್ತಿ ಭಾನುವಾರ ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ.

ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ ವರ್ಕ್, AIR ನ್ಯೂಸ್ ವೆಬ್‌ ಸೈಟ್ ಮತ್ತು ನ್ಯೂಸ್‌ ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.

ಅದಲ್ಲದೆ ಎಐಆರ್ ನ್ಯೂಸ್, ಡಿಡಿ ನ್ಯೂಸ್, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿ ಲೈವ್-ಸ್ಟ್ರೀಮ್ ಆಗುತ್ತದೆ. ಹಿಂದಿ ಪ್ರಸಾರದ ನಂತರ ತಕ್ಷಣವೇ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು AIR ಪ್ರಸಾರ ಮಾಡುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಪ್ರಧಾನಿಯಾದ ವರ್ಷದಲ್ಲೇ ಮನ್ ಕೀ ಬಾತ್ ಕಾರ್ಯಕ್ರಮವನ್ನು ಆರಂಭಿಸಿದರು. 2014 ಅಕ್ಟೋಬರ್ 3ರಂದು ಮನ್ ಕೀ ಬಾತ್​ನ ಮೊದಲ ಎಪಿಸೋಡ್ ಪ್ರಸಾರವಾಯಿತು. ಇಂದು ನಡೆಯಲಿರುವುದು (Mann ki Baat 97th Episode) 97ನೇ ಕಾರ್ಯಕ್ರವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!