Saturday, December 9, 2023

Latest Posts

ಇಂದು ಭೋಪಾಲ್‌ಗೆ ಪ್ರಧಾನಿ ಭೇಟಿ: ಬಿಜೆಪಿ ಕಾರ್ಯಕರ್ತರ ಬೃಹತ್ ಸಭೆಯನ್ನುದ್ದೇಶಿಸಿ ಮೋದಿ ಮಾತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಪ್ರದೇಶದ ಭೋಪಾಲ್‌ಗೆ ಭೇಟಿ ನೀಡಲಿದ್ದು, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆಯ ಅಂಗವಾಗಿ 10 ಲಕ್ಷ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಭೋಪಾಲ್‌ನ ಜಾಂಬೋರಿ ಮೈದಾನದಲ್ಲಿ ನಡೆಯಲಿಯಲಿರುವ ಕಾರ್ಯಕರ್ತರ ಮಹಾಕುಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ತದನಂತರ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಆಯೋಜಿಸಲಾಗಿರುವ ಈ ಕಾರ್ಯಕ್ರಮಕ್ಕೆ 10 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ.

ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಐದು ರಾಜ್ಯಗಳಲ್ಲಿ ಮಧ್ಯಪ್ರದೇಶವೂ ಸೇರಿದೆ. 230 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಬಿಜೆಪಿ ಈಗಾಗಲೇ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!