ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶ ಕಂಡ ಮಹಾನ್ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಸದಾ ಒಂದಿಲ್ಲೊಮ್ಮೆಲೆ ಸರಳತೆಯಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದೀಗ ಅಂತಹುದೇ ಮತ್ತೊಂದು ಸಂದರ್ಭ ಅವರ ಸರಳತೆಗೆ ಸಾಕ್ಷಿಯಾಗಿದೆ.
ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು. ಲೋಕ ಕಲ್ಯಾಣ ಮಾರ್ಗದಲ್ಲಿ ಪ್ರಧಾನಿ ಮೋದಿ ಕೌಂಟರ್ನಲ್ಲಿ ಟಿಕೆಟ್ ಟೋಕನ್ ಪಡೆದು ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು. ಮೆಟ್ರೋ ನಿಲ್ದಾಣದಲ್ಲಿ ಅವರನ್ನು ಕಂಡು ಜನರು ಆಶ್ಚರ್ಯಚಕಿತರಾಗಿದ್ದರು. ಪ್ರಧಾನಿಯ ಮೆಟ್ರೋ ಪ್ರಯಾಣದಿಂದ ಸಹ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.
ದೆಹಲಿ ಮೆಟ್ರೋದಲ್ಲಿ ಸಾಮಾನ್ಯರಂತೆ ಕುಳಿತು ಪ್ರಧಾನಿ ಮೋದಿ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ವಿಶ್ವವಿದ್ಯಾಲಯದವರೆಗೆ ಹಳದಿ ಮಾರ್ಗದ ಮೆಟ್ರೋದಲ್ಲಿ ಪ್ರಯಾಣಿಸಿದರು.
ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ. ಈ ವೇಳೆ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೆಂಟರ್ ಮತ್ತು ತಂತ್ರಜ್ಞಾನ ವಿಭಾಗದ ಕಟ್ಟಡ ಮತ್ತು ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನಲ್ಲಿ ನಿರ್ಮಿಸಲಾಗುವ ಶೈಕ್ಷಣಿಕ ಬ್ಲಾಕ್‌ನ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.