Sunday, June 4, 2023

Latest Posts

‘ಮನ್​ ಕೀ ಬಾತ್’ 100ನೇ ಸಂಚಿಕೆ ಪ್ರಸಾರಕ್ಕೂ ಮುನ್ನ ಪ್ರಧಾನಿ ಮೋದಿ ಟ್ವೀಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನಿ ನರೇಂದ್ರ ಮೋದಿಯವರು ನಡೆಸಿಕೊಡುವ ರೇಡಿಯೋ ಕಾರ್ಯಕ್ರಮ ಮನ್​ ಕೀ ಬಾತ್‌ನ 100ನೇ ಸಂಚಿಕೆ ಇಂದು ಪ್ರಸಾರವಾಗಲಿದ್ದು, ಪ್ರಸಾರಕ್ಕೂ ಮುನ್ನ ಪ್ರಧಾನಿ ಟ್ವೀಟ್​ ಮಾಡಿದ್ದಾರೆ.

ಪ್ರಧಾನಿ ಮೋದಿ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ, ಇಂದು ಬೆಳಿಗ್ಗೆ 11 ಗಂಟೆಗೆ 100ನೇ ಆವೃತ್ತಿಯ ʼಮನ್‌ ಕಿ ಬಾತ್‌ʼ ಕಾರ್ಯಕ್ರಮ ಪ್ರಸಾರವಾಗುತ್ತಿದೆ. 100 ಸಂಚಿಕೆಗಳನ್ನು ತಲುಪುವ ಪ್ರಯಾಣ ಅತ್ಯಂತ ವಿಶೇಷ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಕಾರ್ಯಕ್ರಮವನ್ನು ಆಲಿಸುವಂತೆ ಜನತೆಗೆ ಪ್ರಧಾನಿ ಮನವಿ ಮಾಡಿ ಟ್ವೀಟ್‌ ಮಾಡಿದ್ದಾರೆ.

ಬಿಜೆಪಿಯ ಇತರ ನಾಯಕರು ಕೂಡ ಕಾರ್ಯಕ್ರಮದ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮ ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುತ್ತದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!