ಇಂದು ಕರ್ನಾಟಕದಲ್ಲಿ ಪ್ರಧಾನಿ ಮೋದಿ : ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕರ್ನಾಟಕಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದಿನ ಅವರ ಭೇಟಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ನಂತರ ಪ್ರಧಾನಮಂತ್ರಿಯವರು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ.

ನಂತರ ಬೆಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸುವ ಪ್ರಧಾನಿಯವರು ವೈಟ್‌ಫೀಲ್ಡ್ ಮತ್ತು ಕೆಆರ್ ಪುರಂ ನಡುವೆ ಸುಮಾರು 4250 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 13.71 ಕಿಮೀ ಉದ್ದದ ಹೊಸ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ ದಾವಣಗೆರೆಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ.

ದಾವಣಗೆರೆ ಕಾರ್ಯಕ್ರಮದ ನಂತರ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿರುವ ಮೋದಿ, ಶಿವಮೊಗ್ಗ ವಿಮಾನ ನಿಲ್ದಾಣದಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!