ನಾಳೆ ತೆಲಂಗಾಣಕ್ಕೆ ಮೋದಿ : ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಹೈದರಾಬಾದ್‌ಗೆ ಭೇಟಿ ನೀಡಲಿದ್ದು, ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ಸಿಕಂದರಾಬಾದ್ ಪರೇಡ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.

ನಾಳೆಯಿಂದ ಪ್ರಾರಂಭವಾಗುವ ಮೂರು ರಾಜ್ಯಗಳ ಪ್ರವಾಸದ ಮೊದಲ ಹಂತದಲ್ಲಿ ಅವರು ತೆಲಂಗಾಣದಲ್ಲಿ ಒಟ್ಟು 11 ಸಾವಿರದ 355 ಕೋಟಿ ರೂಪಾಯಿಗಳ ಇತರ ಯೋಜನೆಗಳಲ್ಲದೆ ಹಲವಾರು ರೈಲು ಮತ್ತು ಹೆದ್ದಾರಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಜೊತೆಗೆ ಸಿಕಂದರಾಬಾದ್‌ನಿಂದ ತಿರುಪತಿಗೆ ತೆರಳುವ ವಂದೇ ಭಾರತ್ ರೈಲಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ.

ಸುಮಾರು 715 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಂಡ ಸಿಕಂದರಾಬಾದ್ ರೈಲು ನಿಲ್ದಾಣದ ಮರು ಅಭಿವೃದ್ಧಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!