ಹೊಸದಿಗಂತ ಡಿಜಿಟಲ್ ಡೆಸ್ಕ್ :
ಟ್ರಾಫಿಕ್ ಕಿರಿಕಿರಿಯಿಂದ ಬೇಸತ್ತ ಬೆಂಗಳೂರಿಗರಿಗೆ ಸಿಹಿಸುದ್ದಿ ಇಲ್ಲಿದೆ. ಕೆ.ಆರ್ ಪುರಂ ವೈಟ್ ಫೀಲ್ಡ್ ಮೆಟ್ರೋ ಮಾರ್ಗ ಸೇವೆ ಆರಂಭವಾಗಲಿದ್ದು, ಮಾರ್ಚ್. 25 ರಂದು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.
ವೈಟ್‌ಫೀಲ್ಡ್‌ನಿಂದ ಕೆಆರ್ ಪುರಂವರೆಗಿನ 13.71 ಕಿಮೀ ಉದ್ದದ ಆರ್-1 ವಿಸ್ತರಣಾ ಮಾರ್ಗದ ಅಂತಿಮ ಹಂತದ ಟ್ರಯಲ್ ರನ್ ಅನ್ನು ರೈಲ್ವೆ ಸೇಫ್ಟಿ ಕಮಿಷನ್ ಈಗಾಗಲೆ ನಡೆಸಿದೆ. ಈ ಮಾರ್ಗದಲ್ಲಿ ಗಂಟೆಗೆ 80 ಕಿ. ಮೀ. ವೇಗದಲ್ಲಿ ನಮ್ಮ ಮೆಟ್ರೋ ರೈಲುಗಳನ್ನು ಓಡಿಸಿ ಪರೀಕ್ಷೆ ನಡೆಸಲಾಗಿದೆ. 13 ಕಿ. ಮೀ. ಮಾರ್ಗವನ್ನು 12 ನಿಮಿಷಗಳಲ್ಲಿ ರೈಲು ಕ್ರಮಿಸಿದೆ.
ಈ 13.71 ಕಿಲೋಮೀಟರ್ ಮೆಟ್ರೋ ಮಾರ್ಗದಲ್ಲಿ 12 ನಿಲ್ದಾಣಗಳಿವೆ. ವೈಟ್‌ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯ ಸಾಯಿ ಆಸ್ಪತ್ರೆ, ನಲ್ಲೂರು ಹಳ್ಳಿ, ಕುಂದನಹಳ್ಳಿ, ಸೀತಾರಾಮ ಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರಪಾಳ್ಯ, ಮಹದೇವಪುರ ಮತ್ತು ಕೆಆರ್ ಪುರಂ. ಮತ್ತು ಬೆನ್ನಿಗಾನಹಳ್ಳಿ ನಿಲ್ದಾಣಗಳಿವೆ.