ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನ ಮಂತ್ರಿಯವರ ಮಾಸಿಕ ರೇಡಿಯೋ ಕಾರ್ಯಕ್ರಮ ʼಮನ್ ಕಿ ಬಾತ್ʼ 100ನೇ ಸಂಚಿಕೆಯು ನಾಳೆ ಪ್ರಸಾರವಾಗಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗುತ್ತಿದೆ.
ಮನ್ ಕಿ ಬಾತ್ನ 100ನೇ ಸಂಚಿಕೆಯನ್ನು ವಿಶ್ವಾದ್ಯಂತ ಪ್ರಸಾರ ಮಾಡುವುದಕ್ಕೆ ನಿರ್ಧರಿಸಲಾಗಿದ್ದು, ಇದಕ್ಕೆ ಭರದಿಂದ ಸಿದ್ಧತೆಗಳು ಸಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವು ಅಕ್ಟೋಬರ್ 3, 2014 ರಂದು ಆರಂಭವಾಗಿತ್ತು. ಮನ್ ಕಿ ಬಾತ್ನ 100ನೇ ಸಂಚಿಕೆ ಏಪ್ರಿಲ್ 30 ರಂದು ಪ್ರಸಾರವಾಗಲಿದೆ. 100ನೇ ಸಂಚಿಕೆ ಏಪ್ರಿಲ್ 30 ರಂದು ಪ್ರಸಾರವಾಗಲಿದ್ದು, 100ನೇ ಸಂಚಿಕೆಯನ್ನು ವಿಶೇಷವಾಗಿ ಯಶಸ್ವಿಗೊಳಿಸಲು ಬಿಜೆಪಿ ಒಂದು ಲಕ್ಷಕ್ಕೂ ಹೆಚ್ಚು ಬೂತ್‌ಗಳಲ್ಲಿ ಪ್ರಸಾರ ಮಾಡಲು ಸಿದ್ಧತೆ ಮಾಡಿಕೊಂಡಿದೆ.