ಲಾಲ್ ಬಹದ್ದೂರ್ ಶಾಸ್ತ್ರಿ ಜೀವನ ಪಯಣ, ಸಾಧನೆಗಳ ವಿಡಿಯೋ ಹಂಚಿಕೊಂಡು ನುಡಿನಮನ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಾಜಿ ಪ್ರಧಾನಿ ದಿ.ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯಂದು ಅವರ ಜೀವನ ಸಾಧನೆಯನ್ನು ಸ್ಮರಿಸುತ್ತಾ ನುಡಿನಮನ ಸಲ್ಲಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಮೋದಿ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ತಮ್ಮ ಆಲೋಚನೆಗಳ ವಿಚಾರಧಾರೆಗಳ ವೀಡಿಯೊವನ್ನು ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದಾರೆ. ದೆಹಲಿಯ ಪ್ರಧಾನಮಂತ್ರಿ ಸಂಗ್ರಹಾಲಯದಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿಯವರ ಗ್ಯಾಲರಿಯಿಂದ, ಶಾಸ್ತ್ರಿಯವರು ಪ್ರಧಾನಿಯಾಗಿ ತಮ್ಮ ಜೀವನ ಪಯಣ ಮತ್ತು ಸಾಧನೆಗಳನ್ನು ಪ್ರದರ್ಶಿಸುವ ಕೆಲವು ವಿಡಿಯೋ ತುಣುಕುಗಳನ್ನು ಮೋದಿ ಹಂಚಿಕೊಂಡಿದ್ದಾರೆ.

“ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಅವರ ಸರಳತೆ ಮತ್ತು ನಿರ್ಣಯ ಕೈಗೊಳ್ಳುವ ಚಾಕಚಕ್ಯತೆಗಳಿಂದ ಭಾರತದಾದ್ಯಂತ ಮೆಚ್ಚುಗೆ ಪಡೆದಿದ್ದಾರೆ. ನಮ್ಮ ಇತಿಹಾಸದ ಅತ್ಯಂತ ನಿರ್ಣಾಯಕ ಸಮಯದಲ್ಲಿ ಅವರ ಕಾಠಿಣ್ಯದಿಂದ ಕೂಡಿದ್ದ ನಾಯಕತ್ವವು ಯಾವಾಗಲೂ ನೆನಪಿನಲ್ಲಿ ಉಳಿಯುವಂತಹದ್ದು. ಅವರ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿಗಳು.” ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

“ಇಂದು, ಶಾಸ್ತ್ರಿ ಜಿ ಅವರ ಜಯಂತಿಯಂದು ನಾನು ದೆಹಲಿಯ ಪ್ರಧಾನಮಂತ್ರಿ ಸಂಗ್ರಹಾಲಯದಲ್ಲಿರುವ ಅವರ ಗ್ಯಾಲರಿಯ ಕೆಲವು ನೋಟಗಳನ್ನು ಹಂಚಿಕೊಳ್ಳುತ್ತಿದ್ದೇನೆ, ಇದು ಪ್ರಧಾನಿಯಾಗಿ ಅವರ ಜೀವನ ಪಯಣ ಮತ್ತು ಸಾಧನೆಗಳನ್ನು ಪ್ರದರ್ಶಿಸುತ್ತದೆ. ಇಂತಹ ಸಂಗತಿಗಳನ್ನು ಕಣ್ತುಂಬಿಕೊಳ್ಳಲು ಮ್ಯೂಸಿಯಂಗೆ ಭೇಟಿ ಕೊಡಿ..” ಎಂದು ಮೋದಿಯವರು ಕರೆನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!