ದ್ರಾಕ್ಷಿ ಗಾತ್ರದ ಭ್ರೂಣದ ಹೃದಯ ಯಶಸ್ವಿ ಶಸ್ತ್ರ ಚಿಕಿತ್ಸೆಗೆ ಏಮ್ಸ್‌ ವೈದ್ಯರನ್ನು ಶ್ಲಾಘಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ತಾಯಿಯ ಗರ್ಭದಲ್ಲಿರುವ ದ್ರಾಕ್ಷಿ ಗಾತ್ರದ ಹೃದಯದ ಮೇಲೆ 90 ಸೆಕೆಂಡುಗಳಲ್ಲಿ ನಡೆಸಿದ ಅಪರೂಪದ ಯಶಸ್ವಿ ಶಸ್ತ್ರಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ವೈದ್ಯರ ತಂಡದ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ದೇಶವು ನಮ್ಮ ವೈದ್ಯರ ಕೌಶಲ್ಯ ಮತ್ತು ನಾವೀನ್ಯತೆಯ ಬಗ್ಗೆ ಹೆಮ್ಮೆಪಡುತ್ತದೆ ಎಂದು ಪ್ರಧಾನಿ ಹೇಳಿದರು.

ಏನಿದು ಘಟನೆ ?:
ಮೂರು ಬಾರಿ ಗರ್ಭಪಾತಕ್ಕೆ ಒಳಗಾಗಿದ್ದ 28 ವರ್ಷದ ಮಹಿಳೆಯೊಬ್ಬರು ಏಮ್ಸ್‌ಗೆ ದಾಖಲಾಗಿದ್ದರು. ಮಗುವಿನ ಹೃದಯದಲ್ಲಿ ಸಮಸ್ಯೆ ಇದೆ ಎಂದು ವೈದ್ಯರು ತಿಳಿಸಿದ್ದರು. ಮಗುವನ್ನು ಉಳಿಸಿಕೊಳ್ಳಲು ಮುಂದಾದ ದಂಪತಿ ಶಸ್ತ್ರ ಚಿಕಿತ್ಸೆಗೆ ಒಪ್ಪಿಗೆ ನೀಡಿದ್ದರು. ಅದಾದ ಬಳಿಕ ಏಮ್ಸ್‌ ನ ವೈದ್ಯರು ತಮ್ಮ ಅಪರೂಪದ ಪ್ರಯತ್ನದೊಂದಿಗೆ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!