spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಹಿಳಾ ಹಾಕಿ ತಂಡದ ಸಾಧನೆಗೆ ಪ್ರಧಾನಿ ಹರ್ಷ: ನಾಯಕಿ, ಕೋಚ್​ಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ ಮೋದಿ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೊ ಒಲಿಂಪಿಕ್ಸ್ 2020 ರ ಸೆಮಿಫೈನಲ್‌ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಅರ್ಜೆಂಟೀನಾ ವಿರುದ್ಧ 2-1 ಅಂತರದಿಂದ ಸೋಲೊಪ್ಪಿಕೊಂಡಿದೆ. ಈ ಮೂಲಕ ಫೈನಲ್ ತಲುಪುವಲ್ಲಿ ವಿಫಲವಾಯಿತು.
ಅದಾಗ್ಯೂ, ಭಾರತದ ವನಿತೆಯರ ಹಾಕಿ ತಂಡದ ಈ ಸಾಧನೆಗೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಪಂದ್ಯದ ನಂತರ ಪ್ರಧಾನಿ ಮೋದಿ, ಹಾಕಿ ತಂಡದ ನಾಯಕಿ ರಾಂಪಾಲ್ ಮತ್ತು ಕೋಚ್​ ಸ್ಜೋರ್ಡ್ ಮಾರಿಜ್ನೆ ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
‘ಗೆಲುವು ಮತ್ತು ಸೋಲುಗಳು ಜೀವನದ ಒಂದು ಭಾಗವಾಗಿದ್ದು, ನಿರಾಶೆಗೊಳ್ಳಬಾರದು. ಮಹಿಳಾ ಹಾಕಿ ತಂಡವು ಬಹಳ ಕಷ್ಟಪಟ್ಟು ಕೆಲಸ ಮಾಡಿದೆ. ಅದ್ರಂತೆ, ಕ್ರೀಡಾಪಟುಗಳು ಮುಂದಿನ ಹಂತದ ಬಗ್ಗೆ ಗಮನ ಹರಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿದ್ದಾರೆ.
ಭಾರತಕ್ಕೆ ಈಗ ಕಂಚಿನ ಪದಕ ಗೆಲ್ಲುವ ಅವಕಾಶವಿದೆ. ಇದಕ್ಕಾಗಿ ಅವರು ಗ್ರೇಟ್ ಬ್ರಿಟನ್ ಅನ್ನು ಎದುರಿಸಬೇಕಾಗುತ್ತದೆ. ಈ ಪಂದ್ಯವು ಆಗಸ್ಟ್ 6 ರಂದು ನಡೆಯಲಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss