ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಂಸದ ಪ್ರತಾಪ್ ಸಿಂಹ ಜನ್ಮದಿನ: ಕನ್ನಡದಲ್ಲಿಯೇ ಪತ್ರ ಬರೆದು ಶುಭ ಕೋರಿದ ಪ್ರಧಾನಿ ಮೋದಿ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಇಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಜನ್ಮದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಪತ್ರ ಬರೆದು ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.
‘ಪ್ರತಾಪ್ ಸಿಂಹ ದೀರ್ಘಕಾಲ ಆರೋಗ್ಯಯುತವಾಗಿ ಜೀವಿಸುವಂತಾಗಲಿ ಹಾಗೂ ಜೀವನದ ಪ್ರತಿ ಹೆಜ್ಜೆಯಲ್ಲೂ ಯಶಸ್ಸು ದೊರೆಯುವಂತಾಗಲಿ. ಮುಂಬರುವ ವರ್ಷಗಳಲ್ಲಿ ತಮ್ಮ ಉತ್ತಮ ಮತ್ತು ಸುಸ್ಥಿತಿಯು ಮುಂದುವರಿಯಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದ ಪ್ರತಾಪ್ ಸಿಂಹಗೆ ಹಾರೈಸಿದ್ದಾರೆ.
ಜತೆಗೆ ಪತ್ರದಲ್ಲಿ ತಮ್ಮ ಸಹಿಯನ್ನೂ ನಮೂದಿಸಿದ್ದಾರೆ.
ಪತ್ರದ ಪ್ರತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss