ಗಣಪನ ಹಬ್ಬಕ್ಕೆ ಗಣ್ಯರು ಹೇಳಿದರು ಜನತೆಗೆ ಶುಭಾಶಯ: ಏನಂದ್ರು ಮೋದಿ, ಮುರ್ಮು, ಬೊಮ್ಮಾಯಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಗದೆಲ್ಲೆಡೆಯಲ್ಲಿ ಗಣೇಶ ಚತುರ್ಥಿ ಹಬ್ಬ ಆಚರಿಸಲಾಗುತ್ತಿದ್ದರೆ, ಜನತೆಗೆ ಶುಭಾಶಯ ಕೋರುವ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಹಬ್ಬದ ಸಂಭ್ರಮಕ್ಕೆ ಇನ್ನಷ್ಟು ಮೆರುಗು ನೀಡಿದ್ದಾರೆ.

ಜನತೆಗೆ ಗಣೇಶ ಚತುರ್ಥಿಯ ಹಬ್ಬದ ಶುಭಾಶಯ. ಗಣೇಶನ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರೆ, ಗಣಪನು ಜ್ಞಾನ, ಸಾಧನೆ ಮತ್ತು ಅದೃಷ್ಟದ ಸಂಕೇತವಾಗಿದೆ. ಆತನ ಆಶೀರ್ವಾದದಿಂದ ಪ್ರತಿಯೊಬ್ಬರ ಬದುಕಿನಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಹರಡಲಿ ಎಂದು ನಾನು ಹಾರೈಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿ ಹಬ್ಬದ ಶುಭಾಶಯ. ವಿಘ್ನ ನಿವಾರಕ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಿ, ನಾಡಿನಲ್ಲಿ ಜನತೆ ಸುಖ, ಶಾಂತಿ, ಸಮೃದ್ಧಿಯಿಂದ ನೆಲೆಸಲು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!