ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಿದ ಪ್ರಧಾನಿ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜೆಡಿಎಸ್‌ ನಾಯಕ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡಿದ್ದಾರೆ. ಇದು ಲೈಂಗಿಕ ಹಗರಣವಲ್ಲ ಸಾಮೂಹಿಕ ಅತ್ಯಾಚಾರ. ಕರ್ನಾಟಕದ ಜನರ ಮುಂದೆ ಪ್ರಧಾನಿ ಈ ಸಾಮೂಹಿಕ ಅತ್ಯಾಚಾರಿಯನ್ನು ಬೆಂಬಲಿಸಿ ಮತ ಕೇಳುತ್ತಿದ್ದರು. ಈ ಸಾಮೂಹಿಕ ಅತ್ಯಾಚಾರಿಗೆ ಮತ ನೀಡಿ, ಅದು ಅವರಿಗೆ ಸಹಾಯ ಮಾಡುತ್ತದೆ ಎನ್ನುವುದಾಗಿ ಮೋದಿ ಹೇಳಿದ್ದರು ಎಂದು ಟೀಕಿಸಿದ್ದಾರೆ.

ಮೋದಿಯನ್ನು ಗುರಿಯಾಗಿಸಿಕೊಂಡು ಅತ್ಯಾಚಾರಿ ಪರವಾಗಿ ಮತಯಾಚಿಸಿದ್ದಕ್ಕಾಗಿ ಅವರು ದೇಶದ ತಾಯಂದಿರು ಮತ್ತು ಸಹೋದರಿಯರಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ಅವರು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!