Sunday, July 3, 2022

Latest Posts

ಸಂಸತ್‌ನ ಮುಂಗಾರು ಅಧಿವೇಶನ: ಆರೋಗ್ಯಕರ, ಅರ್ಥಪೂರ್ಣ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದ ಪ್ರಧಾನಿ ಮೋದಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸಂಸತ್‌ನ ಮುಂಗಾರು ಅಧಿವೇಶನ ಸಂದರ್ಭದಲ್ಲಿ ವಿವಿಧ ವಿಷಯಗಳ ಕುರಿತು ಆರೋಗ್ಯಕರ ಹಾಗೂ ಅರ್ಥಪೂರ್ಣ ಚರ್ಚೆಗೆ ಸರ್ಕಾರ ಸಿದ್ಧವಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದರು.
ಸಂಸತ್​​ನ ಮುಂಗಾರು ಅಧಿವೇಶನಕ್ಕೆ ಮುನ್ನ ದಿನ ನಡೆದ ಸರ್ವ ಪಕ್ಷ ಸಭೆಯಲ್ಲಿ ಮೋದಿ ಈ ಕುರಿತು ಹೇಳಿದ್ದಾರೆ.
33 ಪಕ್ಷಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲ ಜನಪ್ರತಿನಿಧಿಗಳು ನೀಡುವ, ವಿಶೇಷವಾಗಿ ವಿರೋಧ ಪಕ್ಷಗಳ ಸಂಸದರಿಂದ ಬರುವ ಸಲಹೆಗಳಿಗೆ ಹೆಚ್ಚಿನ ಮೌಲ್ಯ ಇರುತ್ತದೆ. ಅವರು ನೀಡುವ ಸಲಹೆ-ಸೂಚನೆಗಳು, ಪ್ರಸ್ತಾಪಿಸುವ ವಿಷಯಗಳಿಂದ ಚರ್ಚೆ ಹೆಚ್ಚು ಮೆರುಗು ಬರುತ್ತದೆ ಎಂಬುದಾಗಿ ಪ್ರಧಾನಿ ಹೇಳಿದರು’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಮತ್ತು ರಾಜ್ಯಸಭೆಯ ಸದನ ಮುಖಂಡ ಪಿಯೂಷ್ ಗೋಯಲ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಉಪಸ್ಥಿತರಿದ್ದರು. 33 ಕ್ಕೂ ಹೆಚ್ಚು ಪಕ್ಷಗಳ ಮುಖಂಡರು ಚರ್ಚೆಯಲ್ಲಿ ಭಾಗವಹಿಸಿದ್ದರು.
ಕಾಂಗ್ರೆಸ್ ನಿಂದ ರಾಜ್ಯಸಭೆ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಮತ್ತು ಲೋಕಸಭೆಯಲ್ಲಿ ನಾಯಕರಾದ ಅಧೀರ್ ರಂಜನ್ ಚೌಧರಿ ಉಪಸ್ಥಿತರಿದ್ದರು.
ತೃಣಮೂಲ ಮೂಲದ ಡೆರೆಕ್ ಒ ಬ್ರಿಯಾನ್, ಡಿಎಂಕೆ ಪಕ್ಷದ ತಿರುಚಿ ಶಿವ, ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಮತ್ತು ಬಿಎಸ್ಪಿಯ ಸತೀಶ್ ಮಿಶ್ರಾ ಸೇರಿದಂತೆ ಎಲ್ಲ ಪ್ರಮುಖ ವಿರೋಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.ಅಪ್ನಾ ದಳದ ಮುಖಂಡ ಮತ್ತು ಎನ್‌ಡಿಎ ಮಿತ್ರ ಅನುಪ್ರಿಯಾ ಪಟೇಲ್ ಮತ್ತು ಎಲ್‌ಜೆಪಿ ಮುಖಂಡ ಪಶುಪತಿ ಪರಾಸ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss