ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ನಿವೃತ್ತ ನ್ಯಾಯಾಧೀಶ ಪಿ.ಎನ್. ದೇಸಾಯಿ ಕಮಿಟಿ ನೀಡಿದ ವರದಿಯಲ್ಲಿ ಕ್ಲೀನ್ ಚಿಟ್ ನೀಡಲಾಗಿದ್ದು, ಈ ವರದಿಯನ್ನು ಕ್ಯಾಬಿನೆಟ್ ಅಂಗೀಕರಿಸಿದೆ.
ಇನ್ನು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಕುಟುಂಬ ಭಾಗಿಯಾಗಿದೆ ಎನ್ನುವ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಈ ಸಂಬಂಧ ಕೇಂದ್ರ ತನಿಖಾ ಸಂಸ್ಥೆಗಳು ತನಿಖೆ ನಡೆಸಿವೆ. ಇದರ ನಡುವೆ ರಾಜ್ಯ ಸರ್ಕಾರ, ಮೂಡ ಪ್ರಕರಣದ ತನಿಖೆಗೆ ಪಿ.ಎನ್.ದೇಸಾಯಿ ನೇತೃತ್ವದ ಏಕ ಸದಸ್ಯ ಆಯೋಗ ರಚನೆ ಮಾಡಲಾಗಿತ್ತು. ಇದೀಗ ವರದಿಯಲ್ಲಿ ಸಿದ್ದರಾಮಯ್ಯನವರ ಪಾತ್ರವಿಲ್ಲ ಎಂದು ಕ್ಲೀನ್ ಚಿಟ್ ನೀಡಲಾಗಿದ್ದು, ಪಿ.ಎನ್.ದೇಸಾಯಿ ವರದಿ ಇಂದಿನ ಕ್ಯಾಬಿನೆಟ್ ನಲ್ಲಿ ಅಂಗೀಕಾರವಾಗಿದೆ.