ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದಲ್ಲಿ ಮಕ್ಕಳ ಉಸಿರಾಟಕ್ಕೆ ನೇರ ಪರಿಣಾಮ ಬೀರುತ್ತಿರುವ ನ್ಯುಮೋನಿಯಾ ಕೇಸ್‌ಗಳು ಹೆಚ್ಚಾಗುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕರ್ನಾಟಕ ಸೇರಿ ಐದು ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.
ಕರ್ನಾಟಕ, ರಾಜಸ್ಥಾನ, ಗುಜರಾತ್, ಉತ್ತರಾಖಂಡ, ಹರಿಯಾಣ ಹಾಗೂ ತಮಿಳುನಾಡು ಸರ್ಕಾರಗಳಿಗೆ ಉಸಿರಾಟದ ಸಮಸ್ಯೆಗಳ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ.
ಎಲ್ಲ ಆರೋಗ್ಯ ಮೂಲಸೌಕರ್ಯಗಳನ್ನು ಪರಿಶೀಲನೆ ಮಾಡಬೇಕು, ಎಲ್ಲ ರೀತಿಯ ಪರೀಕ್ಷೆಗಳಿಗೂ ಸಿದ್ಧವಾಗಬೇಕು, ಜನರಿಗೆ ನ್ಯುಮೋನಿಯಾ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕೇಂದ್ರ ಹೇಳಿದೆ.
ಕೆಮ್ಮುವಾಗ ಹಾಗೂ ಸೀನುವಾಗ ಬಾಯಿ ಮತ್ತರು ಮೂಗನ್ನು ಮುಚ್ಚಿಕೊಳ್ಳುವುದು, ಆಗಾಗ್ಗೆ ಕೈತೊಳೆಯುವುದು, ಕಿಕ್ಕಿರದ ಸ್ಥಳಗಳಿಗೆ ತೆರಳುವಾಗ ಮಾಸ್ಕ್ ಬಳಸುವುದು, ಸ್ಯಾನಿಟೈಸರ್ ಬಳಕೆ ಮಾಡುವುದು, ಯಾವುದೇ ವಸ್ತುಗಳನ್ನು ಮುಟ್ಟಿದಾಗ ಮುಖ ಮುಟ್ಟಿಕೊಳ್ಳದೇ ಇರುವುದು ಒಳ್ಳೆಯದು ಎಂದು ಹೇಳಲಾಗಿದೆ.