August 6, 2026
Thursday, August 6, 2026
spot_img

ಅಪ್ರಾಪ್ತ ವಯಸ್ಕ ಕ್ರೀಡಾಪಟುವಿನ ಮೇಲೆ ಲೈಂಗಿಕ ದೌರ್ಜನ್ಯ: ಬಾಸ್ಕೆಟ್‌ಬಾಲ್ ಕೋಚ್ ವಿರುದ್ಧ POCSO ಪ್ರಕರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ರೀಡಾ ಟೂರ್ನಿಗಾಗಿ ಬೆಂಗಳೂರಿಗೆ ಬಂದಿದ್ದ ಅಪ್ರಾಪ್ತ ಬಾಸ್ಕೆಟ್‌ಬಾಲ್ ಆಟಗಾರನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಂಗಳೂರಿನ ಖಾಸಗಿ ಕ್ಲಬ್‌ನ ಮುಖ್ಯ ಕೋಚ್ ವಿರುದ್ಧ POCSO ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪೋಷಕರಿಂದ ದೂರು

ಜೂನ್ 20ರಂದು ಗಾಂಧಿನಗರದ ವಸತಿ ಕೇಂದ್ರದಲ್ಲಿ ಈ ಘಟನೆ ನಡೆದಿರುವುದಾಗಿ ಬಾಲಕನ ಪೋಷಕರು ಆರೋಪಿಸಿದ್ದಾರೆ. ದೂರಿನ ಆಧಾರದಲ್ಲಿ ಮಂಗಳೂರಿನಲ್ಲಿ ಮೊದಲು ‘ಜೀರೋ ಎಫ್‌ಐಆರ್’ ದಾಖಲಾಗಿದ್ದು, ಘಟನೆ ಬೆಂಗಳೂರಿನಲ್ಲಿ ನಡೆದಿದ್ದರಿಂದ ಪ್ರಕರಣವನ್ನು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ:

ತನಿಖೆ ಆರಂಭ

ಉಪ್ಪಾರಪೇಟೆ ಪೊಲೀಸರು POCSO ಹಾಗೂ ಜುವೆನೈಲ್ ಜಸ್ಟಿಸ್ (JJ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ವಿಚಾರಣೆಗೆ ಕರೆಯಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದ್ದು, ತನಿಖೆಯ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !