ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಆದೇಶ ಕಾಯ್ದರಿಸಿದ ಹೈಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ತೀರ್ಪನ್ನು ಕಾಯ್ದಿರಿಸಿದೆ.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಪೋಕ್ಸೋ ಕೇಸ್ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿತ್ತು. ಈ ಕೇಸ್ ರದ್ದು ಕೋರಿ ಸಲ್ಲಿಸಲಾಗಿದ್ದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅವರಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯಿತಿ ನೀಡಿತ್ತು.

ಇದೀಗ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಸಂತ್ರಸ್ತೆಯ ಸಹೋದರ ಪ್ರಶ್ನಿಸಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧಿಸುವಂತೆ, ಹೆಚ್ಚಿನ ತನಿಖೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿರುವಂತ ಹೈಕೋರ್ಟ್, ವಿಚಾರಣೆ ಪೂರ್ಣಗೊಳಿಸಿ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!