Wednesday, November 26, 2025

ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ : ಇಂದು ಮೊದಲ ಪ್ರಕರಣದ ತೀರ್ಪು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೊ,ಬಂಧನವೊ ಎಂದು ಇಂದು ನಿರ್ಧಾರ ಆಗಲಿದೆ.

2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3 ವರ್ಷಗಳ ಕಾಲ ಪೋಕ್ಸೊ ಕೇಸ್ ವಿಚಾರಣೆ ನಡೆಸಲಾಗಿದೆ

ಈ ಕೇಸ್ ಅಂತಿಮಘಟ್ಟಕ್ಕೆ ಬಂದು ತಲುಪಿದ್ದು, ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ತೀರ್ಪು ಹೊರಬೀಳಲಿದೆ. ಹೀಗಾಗಿ ಮುರುಘಾಶ್ರೀ ಸೇರಿದಂತೆ ಬೆಂಬಲಿಗರು ಹಾಗೂ ಭಕ್ತರಲ್ಲಿ ಟೆನ್ಷನ್ ಶುರುವಾಗಿದೆ. ಹಾಗೆಯೇ ಸಂತ್ರಸ್ತೆಯರ ಕುಟುಂಬದಲ್ಲೂ ಆತಂಕ ಮನೆ ಮಾಡಿದ್ದು, ಎಲ್ಲರಚಿತ್ತ ನ್ಯಾಯಾಲಯದ ತೀರ್ಪಿನತ್ತ ನೆಟ್ಟಿದೆ.

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.

error: Content is protected !!