ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಕೋರ್ಟ್‍ಗೆ ದೋಷಾರೋಪ ಪಟ್ಟಿ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಕೋರ್ಟ್‍ಗೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಯಡಿಯೂರಪ್ಪ ಸೇರಿದಂತೆ 4 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 73 ಸಾಕ್ಷಿಗಳ ಪರಿಗಣಿಸಿ ದೋಷಾರೋಪ ಪಟ್ಟಿ ತಯಾರಿಸಲಾಗಿದೆ.

ಯಡಿಯೂರಪ್ಪ, ಅರುಣ್, ರುದ್ರೇಶ್ ಮತ್ತು ಮರಿಸ್ವಾಮಿ ಎಂಬವರ ವಿರುದ್ಧ ಸಿಐಡಿ ಅಧಿಕಾರಿಗಳು 1ನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನಿಡಿದ್ದಾರೆ ಎಂಬ ಆರೋಪದ ಮೇಲೆ ಸದಾಶಿವನಗರ ಠಾಣೆಯಲ್ಲಿ ಬಿಎಸ್‍ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ನೀಡಿತ್ತು. ತನಿಖೆಗೆ ಹಾಜರಾಗುವಂತೆ ಬಿಎಸ್‍ವೈಗೆ ನೋಟಿಸ್ ಕೊಟ್ಟದ್ದರಿಂದ ಅವರು ಕಾಲಾವಕಾಶ ಕೇಳಿದ್ದರು. ಬಳಿಕ ತನಿಖೆಗೆ ಹಾಜರಾಗಿಲ್ಲ ಎಂದು ಸಿಐಡಿ ಅಧಿಕಾರಿಗಳು, ಅವರ ಬಂಧನಕ್ಕೆ ಅರೆಸ್ಟ್ ವಾರೆಂಟ್ ಪಡೆದಿದ್ದರು. ಬಳಿಕ ಬಿಎಸ್‍ವೈ ಮಧ್ಯಂತರ ಜಾಮೀನು ಪಡೆದಿದ್ದರು.

ಜಾಮೀನು ಪಡೆದ ಬಳಿಕ ಬಿಎಸ್‍ವೈ ಕೋರ್ಟ್ ನಿರ್ದೇಶನದಂತೆ ಸಿಐಡಿ ಅಧಿಕಾರಿಗಳ ಎದುರು ತನಿಖೆಗೆ ಹಾಜರಾಗಿದ್ದರು. ಇದೀಗ ತನಿಖೆ ನಡೆಸಿರುವ ಸಿಐಡಿ ಕೋರ್ಟ್‍ಗೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!