ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್ ನಾಯಕ್ರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿರುವ ಸಂತ್ರಸ್ತೆಯ ಸಹೋದರ ಘಟನೆ ನಡೆದು ಹಲವು ತಿಂಗಳಾದರೂ ಪೊಲೀಸರಿಂದ ಕ್ರಮವಿಲ್ಲ. ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಅವರ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ಕನಿಷ್ಠ 41A ಅಡಿನೊಟೀಸ್ ನೀಡಿ ಅವರನ್ನು ವಿಚಾರಣೆಗೆ ಕರೆದಿಲ್ಲ. ಈ ಮಧ್ಯೆ ದೂರು ನೀಡಿದ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಬಂಧಿಸುವಂತೆ ನಿರ್ದೇಶಿಸಲು ಮನವಿ ಮಾಡಿದ್ದಾರೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು.
ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು.