ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ಬಿಎಸ್ ವೈ ಅವರನ್ನು ಬಂಧಿಸಿದಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಮತ್ತಷ್ಟು ದಿನ ವಿಸ್ತರಣೆ ಮಾಡಿದೆ.
ಪೋಕ್ಸೋ ಪ್ರಕರಣ ರದ್ದು ಕೋರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಆ.22 ಕ್ಕೆ ಮುಂದೂಡಿದೆ.
ಪೋಕ್ಸೋ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಈ ಹಿಂದೆ ಬಿಎಸ್ ವೈ ಅವರನ್ನು ಬಂಧನ ಮಾಡದಂತೆ ಆದೇಶ ಹೊರಡಿಸಿತ್ತು.
ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು.
May be false case but why did you pay her lakhs together money. Would you help in such way those who come to your office for help?