Tuesday, December 2, 2025

ಪೋಕ್ಸೋ ಕೇಸ್‌: ಬಿಎಸ್‌ವೈಗೆ ಸುಪ್ರೀಂನಿಂದ ಬಿಗ್‌ ರಿಲೀಫ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇಂದು ಸಿಜೆಐ ಸೂರ್ಯಕಾಂತ್‌ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ವಿಚಾರಣೆಗೆ ತಡೆ ನೀಡಿದೆ.

ಬಿಎಸ್‌ವೈ ಪರ ಹಿರಿಯ ವಕೀಲ ಸಿದ್ದಾರ್ಥ್‌ ಲೂತ್ರಾ ಅವರು ಹೈಕೋರ್ಟ್‌ ಆದೇಶದಲ್ಲಿರುವ ಕೆಲವು ದೋಷಗಳನ್ನು ಉಲ್ಲೇಖಿಸಿ ವಾದಿಸಿದರು. ವಾದ ಆಲಿಸಿದ ಸುಪ್ರೀಂ ವಿಚಾರಣೆಗೆ ತಡೆ ನೀಡಿ ಸಿಐಡಿಗೆ ನೋಟಿಸ್‌ ಜಾರಿ ಮಾಡಿದೆ

ಈ ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್‌ಗೆ ಅನುಮತಿ ನೀಡಿತ್ತು. ಅದಾದ ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು.

ಪ್ರಕರಣದ ಆರೋಪಿಗಳಾದ ಬಿ.ಎಸ್‌.ಯಡಿಯೂರಪ್ಪ, ವೈ.ಎಂ.ಅರುಣ, ಎಂ.ರುದ್ರೇಶ ಹಾಗೂ ಜಿ.ಮರಿಸ್ವಾಮಿ ಅವರಿಗೆ ಸಮನ್ಸ್‌ ಜಾರಿಗೊಳಿಸಿದ್ದ ವಿಶೇಷ ಸೆಷನ್ಸ್‌ ನ್ಯಾಯಾಲಯವು ಇಂದು (ಡಿ.2) ಕೋರ್ಟ್‌ಗೆ ಖುದ್ದು ಹಾಜರಾಗುವಂತೆ ಆದೇಶಿಸಿತ್ತು.

error: Content is protected !!