ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೊಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪನವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪೊಲೀಸರು ಸಲ್ಲಿಸಿದ್ದ ಅರ್ಜಿ ಮನ್ನಿಸಿದ ಕೋರ್ಟ್ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್ ದೀಕ್ಷಿತ್ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ಸೋಮವಾರ ವಿಚಾರಣೆಗೆ ಹಾಜರಾಗಲು ಸಿದ್ಧರಿದ್ದೀರಾ? ಎಂದು ಯಡಿಯೂರಪ್ಪ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನೆ ಮಾಡಿದ್ದು, ಆದೇಶ ಪಾಲಿಸಲಾಗುವುದು ಎಂದು ಸಿ.ವಿ.ನಾಗೇಶ್ ಹೇಳಿದ್ದಾರೆ.
ಎಫ್‌ಐಆರ್ ನಂತರ ಮಾರ್ಚ್ 14ರಂದು ತನಿಖೆ ಆರಂಭವಾಗುತ್ತಿದ್ದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಏ.12ರಂದು ನೋಟಿಸ್ ನೀಡಿದ್ದಾರೆ ಆ ಸಮಯದಲ್ಲಿ ಪೊಲೀಸರು ಏನು ಮಾಡುತ್ತಿದ್ದರು ಎಂದು ಸಿವಿ ನಾಗೇಶ್ ಕಿಡಿಕಾರಿದ್ದಾರೆ.
ಮೊಬೈಲ್‌ನಲ್ಲಿದ್ದ ವಿಡಿಯೋ, ಧ್ವನಿ ಪರೀಕ್ಷೆ ನಂತರ ನೋಟಿಸ್ ನೀಡಲಾಯಿತು. ಹಾಜರಾಗದ ಕಾರಣಕ್ಕೆ ಬಂಧನದ ವಾರಂಟ್ ಪಡೆಯಲಾಗಿದೆ. ಸುಟ್ಟ ಮೊಬೈಲ್ ಚಿಪ್ನಲ್ಲಿದ್ದ ಡಾಟಾ ತೆಗೆಯಲು ಗುಜರಾತ್ FSLಗೆ ಕಳುಹಿಸಲಾಯಿತು. ಅದಾದ ನಂತರ ಧ್ವನಿ ಪರೀಕ್ಷೆಗೆ ಬೆಂಗಳೂರು ಎಫ್ಎಸ್ಎಲ್ಗೆ ಕಳುಹಿಸಲಾಯಿತು ಎಂದು ಹೈಕೋರ್ಟ್ಗೆ ಎಡಿಜಿಪಿ ಬಿ.ಕೆ.ಸಿಂಗ್ ಹೇಳಿದ್ದಾರೆ. ತನಿಖೆ ಹೇಗೆ ನಡೆಸಬೇಕೆಂಬುದನ್ನ ತನಿಖಾಧಿಕಾರಿ ನಿರ್ಧರಿಸಬೇಕು ಎಂದು ಹೈಕೋರ್ಟ್ ಹೇಳಿದ್ದಾರೆ.