ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಂತೆ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.
ಯಡಿಯೂರಪ್ಪ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಈ ಹಿಂದೆ ಬಿಎಸ್ ವೈ ಅವರನ್ನು ಬಂಧನ ಮಾಡದಂತೆ ಆದೇಶ ಹೊರಡಿಸಿತ್ತು.ಇದೀಗ ಅರ್ಜಿ ವಿಚಾರಣೆಯನ್ನು ಮತ್ತೆ ಒಂದು ವಾರ ಕಾಲ ಮುಂದೂಡಿರುವ ಹೈಕೋರ್ಟ್, ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಆದೇಶವನ್ನೂ ವಿಸ್ತರಣೆ ಮಾಡಿದೆ.