ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿದ್ದ ಮುರುಘಾಶ್ರೀಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಾಧಾರಗಳ ವಿಚಾರಣೆ ಬಹುತೇಕ ಮುಗಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದ ಎ1 ಆರೋಪಿ ಮುರುಘಾಶ್ರೀಗೆ ಹೈಕೋರ್ಟ್ ಈ ಹಿಂದೆ ಜಾಮೀನು ನೀಡಿತ್ತು. ಜಾಮೀನು ವಿಚಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ರದ್ದುಗೊಳಿಸುವಂತೆ ಮನವಿ ಸಲ್ಲಿಸಲಾಗಿತ್ತು.
ಈ ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸಾಕ್ಷ್ಯ ಸಂಗ್ರಹವನ್ನು ಪೂರ್ಣಗೊಳಿಸಬೇಕಿತ್ತು. ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವವರೆಗೆ ಅವರನ್ನು ಕಸ್ಟಡಿಯಲ್ಲಿ ಇರುವಂತೆಯೂ ಆದೇಶಿಸಲಾಗಿತ್ತು. ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ನಂತರ ನ್ಯಾಯಾಲಯ ಇಂದು ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.