Wednesday, December 7, 2022

Latest Posts

ಪೋಕ್ಸೋ ಪ್ರಕರಣ: ಮೂರು ದಿನಗಳ ಕಾಲ ಮುರುಘಾ ಶ್ರೀ ‌ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರ್ಟ್​ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.

ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಅ.13ರಂದು ಪ್ರಕರಣ ದಾಖಲಾಗಿತ್ತು. ಬಳಿಕ ಅ.14ಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಮೊದಲನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಶರಣರು ಜೈಲಿನಲ್ಲಿದ್ದ ಹಿನ್ನೆಲೆಯಲ್ಲಿ ದಾಖಲಾಗಿದ್ದ 2ನೇ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 8 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು.

ಬಳಿಕ ವಾದ – ಪ್ರತಿವಾದ ಆಲಿಸಿದ ನ್ಯಾಯಾಲವು, ಮುರುಘಾ ಶರಣರನ್ನು ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದು, ನವೆಂಬರ್‌ 5ರವರೆಗೆ ವಿಚಾರಣೆ ನಡೆಸಲು ಅನುಮತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!