ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುರುಘಾ ಶ್ರೀಗಳ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.
ಚಿತ್ರದುರ್ಗದ 2 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶ ಹೊರಡಿಸಿದ್ದು, ನಾಳೆ ಸರ್ಕಾರಿ ಪರ ವಕೀಲ ಜಗದೀಶ್ ವಾದ ಮಂಡಿಸಲಿದ್ದಾರೆ.
ಇತ್ತೀಚೆಗೆ ಶ್ರೀಗಳಿಗೆ ಜಾಮೀನು ನೀಡುವ ಸಂಬಂಧ ಈಗಾಗಲೇ ಹೈಕೋರ್ಟ್ ನೀಡಿರುವ ಪ್ರತಿಯನ್ನು ಶ್ರೀಗಳ ಪರ ವಕೀಲರು ಕೋರ್ಟ್ ಗೆ ಸಲ್ಲಿಕೆ ಮಾಡಿದರು. ನಂತರ ಕೋರ್ಟ್ ನವೆಂಬರ್ 15 ಕ್ಕೆ ವಿಚಾರಣೆ ಮುಂದೂಡಿತ್ತು.