ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಹೈಕೋರ್ಟ್ ಮದ್ಯಂತರ ಆದೇಶ ಹೊರಡಿಸಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಅರ್ಜಿ ವಿಚಾರಣೆಯನ್ನು ಜುಲೈ 26ರವರೆಗೆ ಮುಂದೂಡಿದೆ.
ಅಲ್ಲಿಯವರೆಗೂ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.