ಪೋಕ್ಸೋ ಕೇಸ್​: ಸಮನ್ಸ್​ಗೆ ತಡೆ ನೀಡಿದ ಹೈಕೋರ್ಟ್, ಬಿಎಸ್‌ವೈಗೆ ರಿಲೀಫ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪೋಕ್ಸೋ ಪ್ರಕರಣದ ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ.

ಹಾಗೇ, ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಿದೆ. ಬಿಎಸ್ ಯಡಿಯೂರಪ್ಪ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿ ನ್ಯಾಯಾಲಯ ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.

1 ತಿಂಗಳು 12 ದಿನ ತಡವಾಗಿ ಪೊಕ್ಸೋ ಕೇಸ್ ದಾಖಲಿಸಲಾಗಿದೆ. ಘಟನೆ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸ್ತಿರಲಿಲ್ಲ. ಈ ಹಿಂದೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು. ಈಗ ವಿಶೇಷ ಕೋರ್ಟ್ ಕಾಗ್ನಿಜೆನ್ಸ್ ಪಡೆದು ಸಮನ್ಸ್ ಜಾರಿಗೊಳಿಸಿದೆ ಎಂದು ಬಿಎಸ್​ ಯಡಿಯೂರಪ್ಪ ಪರ ವಕೀಲರು ವಾದಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!