ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುರುಘಾ ಮಠದ ಶಿವಮೂರ್ತಿ ಶರಣರ (Murugha Mutt Shivamurthy Sharanara) ವಿರುದ್ಧ ದಾಖಲಾದ ಒಂದನೇ ಪೋಕ್ಸೋ ಪ್ರಕರಣ (POCSO Case)ದ ಜಾಮೀನು ಅರ್ಜಿಯನ್ನು 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.
ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸಿದ ಬಳಿಕ ಜಾಮೀನು ಕೋರಿ ನ್ಯಾಯಾಲಯಕ್ಕೆ ಮುರುಘಾಶ್ರೀ ಅರ್ಜಿ ಸಲ್ಲಿಸಿದ್ದರು. ಆದರೀಗ ಈ ಅರ್ಜಿಯನ್ನು ಕೋರ್ಟ್ ವಜಾಗೊಳಿಸುವ ಮೂಲಕ ಮುರುಘಾ ಶ್ರೀಗೆ ಮತ್ತೆ ಜೈಲೇ ಗತಿಯಾಗಿದೆ.
ಮುರುಘಾಶ್ರೀ ವಿರುದ್ಧ ಷಡ್ಯಂತರ ಆರೋಪ ಸಂಬಂಧ ಪೊಲೀಸರು ಸಮರ್ಪಕ ತನಿಖೆ ನಡೆಸದೇ ಅಸಹಾಯಕರಾಗಿದ್ದಾರೆ. ಹೀಗಾಗಿ ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ತನಿಖೆ ವರ್ಗಾಯಿಸಲು ಕೋರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನಿನ್ನೆ (ಜ.30) ಹೈಕೋರ್ಟ್ ವಿಚಾರಣೆ ನಡೆಸಿತ್ತು. ಈ ವೇಳೆ ರಾಜ್ಯಸರ್ಕಾರದ ಪ್ರತಿಕ್ರಿಯೆ ಕೇಳಿ ಫೆಬ್ರವರಿ 6ಕ್ಕೆ ವಿಚಾರಣೆಯನ್ನು ಮುಂದೂಡಿದೆ.