Wednesday, October 5, 2022

Latest Posts

ಪೋಕ್ಸೋ ಪ್ರಕರಣ: ಸೆ.5ರವರೆಗೆ ಮುರುಘಾ ಶ್ರೀ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪೋಕ್ಸೋ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಜಿಲ್ಲಾ ಸೆಷನ್​ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರ ಎದುರು ಇಂದು ಶ್ರೀಗಳನ್ನು ಹಾಜರು ಪಡಿಸಲಾಯಿತು. ಅವರನ್ನು ಕೋರ್ಟ್ ಸೆಪ್ಟೆಂಬರ್ 5ರವರೆಗೆ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ.

ಇಬ್ಬರು ಬಾಲಕಿಯರು ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಮಾಡಿದ್ದರು. ಈ ಆರೋಪದಲ್ಲಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಅವರನ್ನು ಕಳೆದ ರಾತ್ರಿ ಬಂಧಿಸಿದ್ದರು. ಬಳಿಕ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!