March 20, 2026
Friday, March 20, 2026
spot_img

ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಹೊಸದಿಗಂತ ವರದಿ ಯಾದಗಿರಿ:

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ ಹಿನ್ನಲೆಯಲ್ಲಿ ಜಿಲ್ಲೆಯ ಶಹಾಪುರ ತಾಲೂಕಿನ‌ಮಹಲ ರೋಜಾದ ಸ್ವಯಂ ದೇವ ಮಾನವ ಮಲ್ಲಿಕಾರ್ಜುನ ಮುತ್ಯಾ ಮೇಲೆ ಪೋಕ್ಸೊ ಪ್ರಕರ ದಾಖಲಿಸಲಾಗಿದೆ.

ಮಲ್ಲಿಕಾರ್ಜುನ ಮುತ್ಯಾ (25) ಮೂಲತಃ ಮಹಲ್ ರೋಜಾ ಗ್ರಾಮದ (ಚಾಂಗದೆವ್) ದೇವಸ್ಥಾನದ (ಮಠ) ಪೀಠಾಧಿಪತಿಯಾಗಿದ್ದು, ಕಳೆದ ಕೆಲ ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ್ದ ವಿಡಿಯೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿದ್ದು ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ:

ರಾಜ್ಯ ಮಕ್ಕಳ ಆಯೋಗ ಮಲ್ಲಿಕಾರ್ಜುನ ಮುತ್ಯಾನ ಮೇಲೆ ಸ್ವಯಂ ಪ್ರಕರಣ ದಾಖಲಿಸಿ, ಜಿಲ್ಲಾ ಪೊಲೀಸ್ ಇಲಾಖೆಗೆ ಪೊಕ್ಸೊ ಪ್ರಜರಣ ದಾಖಲಿಸುವಂತೆ ಸೂಚಿಸಿತ್ತು.‌ ಶಹಾಪುರ ತಾಲೂಕಿನ ಗೋಗಿ ಪೊಲೀಸರು ಮಲ್ಲಿಕಾರ್ಜುನ ಮುತ್ಯಾನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಮುತ್ಯಾನ ಪವಾಡಕ್ಕೆ ಮನಸೋತಿದ್ದ ಜನರು. ಮಲ್ಲಿಕಾರ್ಜುನ ಮುತ್ಯಾ ಹೇಳಿದ ಮಾತು ಸತ್ಯವಾಗುತ್ತೆ ಅಂತಾ ಪವಾಡ ಪುರುಷನಂತೆ ಕಾಣುತ್ತಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !