ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ರಿಲೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ರಿಲೀಫ್ ಸಿಕ್ಕಿದ್ದು, ಸೆ.19 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಈ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಯನ್ನು ನಡೆಸಿದ್ದು, , ಸೆ.19 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!