ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಪ್ರೀಂ ಕೋರ್ಟ್‌ನಲ್ಲಿ ಇಂದು ಪಾಡ್‌ಕ್ಯಾಸ್ಟರ್ ರಣವೀರ್ ಅಲಹಾಬಾದಿಯಾ ತಮ್ಮ ಕಾರ್ಯಕ್ರಮಗಳಲ್ಲಿ ಸಭ್ಯತೆಯನ್ನು ಕಾಪಾಡಿಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠಕ್ಕೆ ರಣವೀರ್ ಅಲಹಾಬಾದಿಯಾ ಪರ ಹಿರಿಯ ವಕೀಲ ಅಭಿನವ್ ಚಂದ್ರಚೂಡ್ ಅವರು ತಮ್ಮ ಕಕ್ಷಿದಾರ ಪ್ರಕರಣದ ತನಿಖೆಯಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.
ಜೊತೆಗೆ ಅಭಿನವ್ ಚಂದ್ರಚೂಡ್ ಅವರು ರಣವೀರ್ ಪಾಸ್‌ಪೋರ್ಟ್ ಅನ್ನು ಠೇವಣಿ ಇಡುವಂತೆ ಸೂಚಿಸಿದ್ದ ಸುಪ್ರೀಂ ಕೋರ್ಟ್‌ನ ಷರತ್ತು ನಲ್ಲಿ ಬದಲಾವಣೆ ಮಾಡುವಂತೆ ಕೇಳಿಕೊಂಡರು.
ಇತ್ತೀಚೆಗೆ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾಣಿಸಿಕೊಂಡ ರಣವೀರ್ ಅಲ್ಲಾಹಬಾಡಿಯಾ ಅನುಚಿತ ಹೇಳಿಕೆ ನೀಡಿದ್ದರು. ಇದಾದ ಬಳಿಕ ದೇಶವ್ಯಾಪ್ತಿ ಆಕ್ರೋಶ ವ್ಯಕ್ತವಾಗಿತ್ತು . ಸುಪ್ರೀಂ ಕೋರ್ಟ್ ಕೂಡ ತ್ರೀವ ಅಸಮಾಧಾನ ಹೊರಹಾಕಿತ್ತು.