Tuesday, June 28, 2022

Latest Posts

ಕವಿ ಡಾ.ಸಿದ್ದಲಿಂಗಯ್ಯ ನಿಧನ: ಪ್ರಧಾನಿ ಮೋದಿ ಸಂತಾಪ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ದಲಿತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
‘ಡಾ.ಸಿದ್ದಲಿಂಗಯ್ಯರವರ ನಿಧನ ಸುದ್ದಿ ಕೇಳಿ ದುಃಖವಾಯಿತು. ಸಿದ್ದಲಿಂಗಯ್ಯರವರ ಸಮೃದ್ಧ ಬರಹಗಳು, ಕವನಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಅವರು ನೀಡಿದ ಕೊಡುಗೆಗಳಿಗಾಗಿ ಅವರನ್ನು ಸ್ಮರಿಸುತ್ತೇನೆ. ದುಃಖದ ಈ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅನೇಕ ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಕೋರಿದ್ದಾರೆ.
ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದ ಅವರು, ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ಸೃಷ್ಟಿಸಿದ್ದರು. 1988-1994 ಮತ್‌ಎತು 1995-2001ರವರೆಗೆ ಬಾರಿ ವಿಧಾನಪರಿಷತ್ ಸದಸ್ಯರಾಗಿಯೂ ಡಾ.ಸಿದ್ದಲಿಂಗಯ್ಯ ಕಾರ್ಯನಿರ್ವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss