ಹೊಸದಿಗಂತ ವರದಿ, ಹುಬ್ಬಳ್ಳಿ:
ರಾಜ್ಯ ಸರ್ಕಾರಕ್ಕೆ ಕೇಂದ್ರ ಸ್ಟ್ರೋಕ್ ಆಗಿದೆ. ಬರಗಾಲ, ಕಾವೇರಿ ಹಾಗೂ ಯಾವುದೇ ವಿಷಯವಾದರೂ ಕೇಂದ್ರ ಸರ್ಕಾರ ಮೇಲೆ ಹೊರಿಸುತ್ತಿದೆ. ಈಗ ವಿದ್ಯುತ್ ಅಭಾವಕ್ಕೂ ಕೆಂದ್ರಕ್ಕೆ ಬೊಟ್ಟು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಹರಿಹಾಯ್ದರು.
ಮಂಗಳವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸರಿಯಾಗಿ ಕಲ್ಲಿದ್ದಲು ಒದಗಿಸಿ ವಿದ್ಯುತ್ ಉತ್ಪಾದನೆ ಮಾಡಿದರೆ ಈ ಸಮಸ್ಯೆ ಬರುತ್ತಿರಲಿಲ್ಲ. ತಮ್ಮ ಹಣಕಾಸಿನ ದುಸ್ಥಿತಿಗೆ ಹಾಗೂ ಅಸಮರ್ಪಕ ಕೆಲಸದಿಂದ ವಿದ್ಯುತ್ ಅಭಾವ ಬಿಗಡಾಯಿಸಿದೆ. ಸರಿಯಾದ ವಿದ್ಯುತ್ತನ್ನು ಪೂರೈಸುವುದು ರಾಜ್ಯ ಸರ್ಕಾರದ ಕರ್ತವ್ಯ. ವಿದ್ಯುತ್ ಉತ್ಪಾದನೆಗೆ ಕೇಂದ್ರ ಏನು ಸಹಾಯ ಮಾಡಬೇಕು ಎಂದು ಪ್ರಶ್ನಿಸಿದರು.
ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಎಲ್ಲ ಇಲಾಖೆಯ ಕಾಮಗಾರಿಗಳ ತನಿಖೆ ಮಾಡಲಿ.
ನರಗುಂದ ಸೇರಿದಂತೆ ಯಾವುದೇ ಕ್ಷೇತ್ರವಾಗಲಿ, ಕಾಮಗಾರಿಗಳ ತನಿಖೆ ಮಾಡಲಿ. ಕಾಮಗಾರಿ ಎಲ್ಲವೂ ಮುಗಿದಿದೆ, ಬಿಲ್‌ಗಳನ್ನು ಸಹ ನೀಡಲಾಗಿದೆ. ಆದರೆ, ಕಾಂಗ್ರೆಸ್ ಸರ್ಕಾರ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲಿನ ಕಾಮಗಾರಿಗಳ ಬಿಲ್ಲನ್ನು ಇನ್ನೂ ಕೊಟ್ಟಿಲ್ಲ. ಮೊದಲು ಬಿಲ್ಲುಗಳನ್ನು ಕೊಡಲಿ, ನಂತರ ಎಲ್ಲೆಲ್ಲಿ ತಪ್ಪುಗಳು ನಡೆದಿದೆ ಇದರ ಬಗ್ಗೆ ತನಿಖೆಯಾಗಲಿ ಎಂದು ಹೇಳಿದರು.