ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದಲ್ಲಿ ಮತ್ತೊಂದು ವಿಷಾನಿಲ ಸೋರಿಕೆ ಪ್ರಕರಣ ವರದಿಯಾಗಿದ್ದು, ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ಹೈದರಾಬಾದ್ ನಗರದ ಪಶ್ಚಿಮ ಮರೇಡಪಲ್ಲಿಯಲ್ಲಿರುವ ಕಸ್ತೂರ್ಬಾ ಸರ್ಕಾರಿ ಕಾಲೇಜಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಸುಮಾರು ಹತ್ತು ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ .
ಕೂಡಲೇಗಾಂಧಿ ಆಸ್ಪತ್ರೆ ಹಾಗೂ ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಕಾಲೇಜಿನ ಲ್ಯಾಬ್ನಲ್ಲಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ಮಾಹಿತಿ ತಿಳಿಯುತ್ತಲೇ ಅಗ್ನಿಶಾಮಕ, ಪೊಲೀಸ್ ಮತ್ತು ಎನ್ ಡಿಆರ್ ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಮೇಲ್ನೋಟಕ್ಕೆ ಕಸ್ತೂರಬಾ ಸರ್ಕಾರಿ ಕಾಲೇಜಿನ ಲ್ಯಾಬ್ನಿಂದಲೇ ರಾಸಾಯನಿಕ ಅನಿಲ ಸೋರಿಕೆಯಾಗಿದೆ ಎಂದು ಹೇಳಲಾಗಿದ್ದು, ಅನಿಲ ಸೋರಿಕಿಗೆ ನಿಖರ ಕಾರಣ ತಿಳಿದುಬಂದಿಲ್ಲ.