November 19, 2026
Thursday, November 19, 2026
spot_img

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೆದ್ದಾರಿ ತಡೆ: ಭಾಲ್ಕಿಯಲ್ಲಿ ಅನ್ನದಾತರನ್ನು ಬಂಧಿಸಿದ ಪೊಲೀಸರು

ಹೊಸದಿಗಂತ ವರದಿ ಬೀದರ್

ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಭಾಲ್ಕಿ ತಾಲ್ಲೂಕಿನ ಅಳಂದಿ ಗ್ರಾಮದ ಸಮೀಪದ ಡೋಣಗಾಪುರ ಕ್ರಾಸ್ ಬಳಿ ಹೆದ್ದಾರಿಯಲ್ಲಿ ರಸ್ತೆ ತಡೆ ಚಳುವಳಿ ನಡೆಸಲಾಯಿತು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸಂತಪುರ ಪೊಲೀಸ್ ಠಾಣೆಗೆ ಕರೆದೊಯ್ದು ಬಂಧಿಸಿದರು.

ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ರೈತರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡದೆ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು. ಬೇಡಿಕೆಗಳು ಈಡೇರುವವರೆಗೆ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಆಗ್ರಹಿಸಿದರು.

ಇದನ್ನೂ ಓದಿ:

ಈ ಸಂದರ್ಭದಲ್ಲಿ ಸರ್ವೋದಯ ಕರ್ನಾಟಕ ಪಕ್ಷ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಸೋಮಯ್ಯ ಸ್ವಾಮೀಜಿ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಗದೀಶ ಕನ್ನಾಳೆ (ಭಾಲ್ಕಿ ತಾಲೂಕು), ಅಮೃತ ಪಾಟೀಲ್, ಸಂಗಶೆಟ್ಟಿ ದಾನಾ, ಹನುಮಂತ, ಸುನಿಲ್, ಬಸವರಾಜ್, ಮಲ್ಲಿಕಾರ್ಜುನ, ಶಿವರಾಜ್, ವಿಲಾಸ, ಪರಮೇಶ, ಚಾಂದ್ ಸಾಬ್, ಸಂತೋಷ್ ಸೇರಿದಂತೆ ಹಲವರು ಇದ್ದರು.

Must Read

Skip to toolbar