ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆಗಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಸಿಂಧನೂರು ಪೊಲೀಸರು ಬಂಧಿಸಿ, 10 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಮೊಹಮ್ಮದ್ ಹುಸೇನ್, ನಾಸೀರ್ ಅಲಿ ಎಂದು ಗುರುತಿಸಲಾಗಿದೆ.
ಪೊಲೀಸರು 110 ಗ್ರಾಂ ಚಿನ್ನಾಭರಣಗಳು, 50 ಗ್ರಾಂ ಬೆಳ್ಳಿ, ಒಂದು ಸ್ಕೂಟಿ ಸೇರಿ ಒಟ್ಟು 10.25 ಲಕ್ಷ ರೂ. ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
ಈ ಕುರಿತು ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.