ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಮಂತ್ರಾಲಯಕ್ಕೆ ಬೆದರಿಕೆ ಕರೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕಾಶ್ ಕಿಶನ್ಚಂದ್ ಖೇಮಾನಿ (61) ಬಂಧಿತ ವ್ಯಕ್ತಿ.
ಆರೋಪಿಯು ಮಹಾರಾಷ್ಟ್ರದ ಮಂತ್ರಾಲಯಕ್ಕೆ ಎರಡು ದಿನಗಳಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ ಎಂದು ಸೋಮವಾರ ರಾತ್ರಿ ಬೆದರಿಕೆ ಕರೆ ಮಾಡಿದ್ದನು. ಈ ಕುರಿತು ಮಂತ್ರಾಲಯ ನಿಯಂತ್ರಣ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪತ್ತೆ ಕಾರ್ಯ ಆರಂಭಿಸಿದ ಪೊಲೀಸರು ಇಂದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.