ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಡಿವೈಎಸ್ಪಿ, ಪುತ್ತೂರು ಗ್ರಾಮಾಂತರ ಠಾಣೆಯ ಎಸ್‌ಐ ಹಾಗೂ ಕಾನ್ಸ್ಟೇಬಲ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಸ್‌ಐ ಮತ್ತು ಕಾನ್ಸ್ಟೇಬಲ್ ನನ್ನು ಅಮಾನತುಗೊಳಿಸಲಾಗಿದೆ.
ಈ ದಿನ ಫಿರ್ಯಾದಿ ಅವಿನಾಶ್ ತಂದೆ ವೇಣುನಾಥ ನರಿಮೋಗ್ರು ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ಡಿವೈಎಸ್ಪಿ, ಗ್ರಾಮಾಂತರ ಠಾಣೆಯ ಎಸ್‌ಐ ಮತ್ತು ಕಾನ್ಸ್ಟೇಬಲ್ ಹರ್ಷಿತ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿವೈಎಸ್ಪಿ ಅವರಿಗೆ ವಹಿಸಲಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಠಾಣೆ ಹಾಗೂ ಕಾನ್ಸ್ಟೇಬಲ್ ಹರ್ಷಿತ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಹಾಗೂ ಡಿವೈಎಸ್ಪಿ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.