ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಬಸ್ ನಿಲ್ದಾಣದ ಬಳಿ ಬಿಜೆಪಿ ನಾಯಕರ ಭಾವಚಿತ್ರದ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಅರ್ಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದುಕೊಂಡವರಿಗೆ ಗಂಭೀರ ಗಾಯಗೊಳ್ಳುವಂತೆ ಹೊಡೆದಿ ದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದರ ಬೆನ್ನಲೇ ಗಾಯಗಳಾಗಿರುವ ಕುರಿತ ಫೋಟೋ, ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತಾಗಿ ಪ್ರತಿಕ್ರಿಯಿಸಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ, ಪ್ರಕರಣದ ಕುರಿತಾಗಿ ದಸ್ತಗಿರಿ ಮಾಡಿದ ಆರೋಪಿತರಿಗೆ ಹಲ್ಲೆ ಮಾಡಿರುವುದಾಗಿ ಜಾಲತಾಣಗಳಲ್ಲಿ ಸುದ್ದಿ ಪ್ರಸಾರ ವಾಗುತ್ತಿರುವುದು ತಿಳಿದು ಬಂದಿದ್ದು, ಈ ಬಗ್ಗೆ ಸತ್ಯಾಂಶ ತಿಳಿಯಲು ಆಂತರಿಕ ವಿಚಾರಣೆ ಕೈಗೊಳ್ಳಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.